Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:7 - ಕನ್ನಡ ಸತ್ಯವೇದವು J.V. (BSI)

7 ಅವರು ಕ್ರೂರರು, ಭಯಂಕರರು; ಅವರ ಅಧಿಕಾರವೂ ಗೌರವವೂ ಅವರಿಂದಲೇ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಭಯಂಕರವಾದವರು ಮತ್ತು ಕ್ರೂರವಾದವರು. ಅವರು ತಮಗೆ ತಾವೇ ಕಾನೂನಾಗಿದ್ದಾರೆ. ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:7
11 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.


ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.


ರಾಜನೇ, ನೀನು ಕಂಡದು ಆಹಾ, ಅದ್ಭುತ ಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು;


ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು