ಹಬಕ್ಕೂಕ 1:8 - ಕನ್ನಡ ಸತ್ಯವೇದವು J.V. (BSI)8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು. ಅಧ್ಯಾಯವನ್ನು ನೋಡಿ |