Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:1 - ಕನ್ನಡ ಸತ್ಯವೇದವು J.V. (BSI)

1 ನನ್ನ ಕೋವರದಲ್ಲಿ ನಿಂತುಕೊಳ್ಳುವೆನು, ಬುರುಜಿನ ಮೇಲೆ ನೆಲೆಯಾಗಿರುವೆನು, ಯೆಹೋವನು ನನಗೆ ಏನು ಹೇಳುವನೋ, ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರಕೊಡಬೇಕೋ ಎಂದು ಎದುರು ನೋಡುವೆನು [ಅಂದುಕೊಂಡೆನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಯೆಹೋವ ದೇವರು ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:1
23 ತಿಳಿವುಗಳ ಹೋಲಿಕೆ  

ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ;


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ದಾವೀದನು ಎರಡು ಬಾಗಲುಗಳ ಮಧ್ಯದಲ್ಲಿ ಕೂತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡನು.


ಯೆಹೋವದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರಿಗಿ ಮೂರ್ಖತನದಲ್ಲಿ ಬೀಳದಿರಲಿ.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವದು; ಉದಯಕಾಲದಲ್ಲಿಯೇ [ಪ್ರಾರ್ಥನೆಯನ್ನು] ಸಮರ್ಪಿಸಿ ಸದುತ್ತರವನ್ನು ಎದುರುನೋಡುತ್ತಿರುವೆನು.


ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.


ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು - ಜನರ ಒಂದು ಗುಂಪು ಕಾಣಿಸುತ್ತದೆ ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ - ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಎಂದು ಕೇಳುವದಕ್ಕಾಗಿ ಕಳುಹಿಸು ಎಂಬದಾಗಿ ಆಜ್ಞಾಪಿಸಿದನು.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ!


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಗುಪ್ತವಾಗಿ ತಮ್ಮ ದೇವರಾದ ಯೆಹೋವನಿಗೆ ವಿರೋಧವಾದ ಕೃತ್ಯಗಳನ್ನು ನಡಿಸಿದರು; ಕಾವಲುಗಾರರ ಬುರುಜುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;


ತುತೂರಿಯ ಶಬ್ದವನ್ನು ಕೇಳಿರಿ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇವಿುಸಲು ನಾವು ಕೇಳಲೊಲ್ಲೆವು ಎಂದು ಹೇಳಿದರು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.


ಕರ್ತನು ನನಗೆ ಹೇಳಿರುವದೇನಂದರೆ - ಕಾವಲುಗಾರನನ್ನು ಇಡು, ನಡೆ; ಕಂಡದ್ದನ್ನು ತಿಳಿಸಲಿ;


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು