Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:15 - ಕನ್ನಡ ಸತ್ಯವೇದವು J.V. (BSI)

15 ಅಯ್ಯೋ, ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವರಿಗೆ ಕುಡಿಸಿ ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:15
16 ತಿಳಿವುಗಳ ಹೋಲಿಕೆ  

ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವದನ್ನು ಕಂಡು ಹೊರಗಿದ್ದ ಅಣ್ಣತಮ್ಮಂದಿರಾದ ಶೇಮ್ ಯೆಫೆತರಿಗೆ ತಿಳಿಸಿದನು.


ಎಲ್ಲಾ ಜನಾಂಗಗಳು ಅವಳ ಅತಿಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳು ಸುಖಭೋಗಿನಿಯಾಗಿದ್ದದರಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ಮರುದಿನ ದಾವೀದನು ಅವನನ್ನು ಅನ್ನಪಾನತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.


ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.


ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು.


[ಅವರ] ಮೇಜುಗಳ ಮೇಲೆಲ್ಲಾ ವಾಂತಿಯೂ ಎಂಜಲೂ ತುಂಬಿವೆ, ಶುದ್ಧಸ್ಥಳವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು