ಹಬಕ್ಕೂಕ 2:16 - ಕನ್ನಡ ಸತ್ಯವೇದವು J.V. (BSI)16 ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು. ಅಧ್ಯಾಯವನ್ನು ನೋಡಿ |