Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:17 - ಕನ್ನಡ ಸತ್ಯವೇದವು J.V. (BSI)

17 ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:17
15 ತಿಳಿವುಗಳ ಹೋಲಿಕೆ  

ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ಹಾಳಾಗುವದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನಮಗೆ ಮಾಡಿದ್ದಕ್ಕೆ ಮುಯ್ಯಿಸಲ್ಲಿಸುವವನು ಧನ್ಯನು.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.


ನಿನ್ನ ವಿುತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಹೊಲಸನ್ನಾಗಿ ತಳ್ಳಿಬಿಟ್ಟೆನು; ಹೌದು. ನೆರಳುಕೊಡುವ ಕೆರೂಬಿಯೇ, ಕೆಂಡದ ಮಳೆಯ ಮಧ್ಯದಲ್ಲಿನ ನಿನ್ನ ನೆಲೆಯಿಂದ ನಾನು ನಿನ್ನನ್ನು ಕಿತ್ತು ಧ್ವಂಸಮಾಡಿದೆನು.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.


ಹೀಗಿರಲು ತನ್ನ ಬಲೆಗೆ ಸಿಕ್ಕಿದ್ದನ್ನು ಅವನು ನಿತ್ಯವೂ ಈಚೆಗೆ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು