ಹಬಕ್ಕೂಕ 2:19 - ಕನ್ನಡ ಸತ್ಯವೇದವು J.V. (BSI)19 ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.” ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;