Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:3 - ಕನ್ನಡ ಸತ್ಯವೇದವು J.V. (BSI)

3 ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:3
33 ತಿಳಿವುಗಳ ಹೋಲಿಕೆ  

ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲದ್ದೇ.


ತಂದೆಯು ನೇವಿುಸಿದ ದಿನದವರೆಗೂ ಪಾಲಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು