Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:7 - ಕನ್ನಡ ಸತ್ಯವೇದವು J.V. (BSI)

7 ನಿನ್ನನ್ನು ಕಚ್ಚುವವರು ಫಕ್ಕನೆ ತಲೆಯೆತ್ತುವರು, ನಿನ್ನನ್ನು ಒದ್ದಾಡಿಸುವವರು ಎಚ್ಚರಗೊಳ್ಳುವರು; ನೀನು ಅವರಿಗೆ ಸೂರೆಯಾಗುವಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲಿದುಕೊಂಡಿರುವೆ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯಗ್ರಸ್ತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:7
19 ತಿಳಿವುಗಳ ಹೋಲಿಕೆ  

ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಯೆಹೋವನು - ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು ಎಂದು ನುಡಿದಿದ್ದಾನೆ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.


ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.


ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಗೋಡೆಯೊಡೆಯುವವನನ್ನು ಹಾವು ಕಚ್ಚುವದು.


ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು