Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:8 - ಕನ್ನಡ ಸತ್ಯವೇದವು J.V. (BSI)

8 ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:8
33 ತಿಳಿವುಗಳ ಹೋಲಿಕೆ  

ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶನವನ್ನು ನೋಡಿ ಹರ್ಷಧ್ವನಿಗೈಯುವವು; ಏಕಂದರೆ ಹಾಳುಮಾಡುವವರು ಬಡಗಲಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;


ಹಾಳಾಗುವದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನಮಗೆ ಮಾಡಿದ್ದಕ್ಕೆ ಮುಯ್ಯಿಸಲ್ಲಿಸುವವನು ಧನ್ಯನು.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.


ನಿನ್ನ ವಿುತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಹೊಲಸನ್ನಾಗಿ ತಳ್ಳಿಬಿಟ್ಟೆನು; ಹೌದು. ನೆರಳುಕೊಡುವ ಕೆರೂಬಿಯೇ, ಕೆಂಡದ ಮಳೆಯ ಮಧ್ಯದಲ್ಲಿನ ನಿನ್ನ ನೆಲೆಯಿಂದ ನಾನು ನಿನ್ನನ್ನು ಕಿತ್ತು ಧ್ವಂಸಮಾಡಿದೆನು.


ಕಾಡಿನಿಂದ ಸೌದೆಯನ್ನು ತರಬೇಕಾಗುವದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವದಿಲ್ಲ; ಆಯುಧಗಳನ್ನೇ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಕರ್ತನಾದ ಯೆಹೋವನ ನುಡಿ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ಯೆಹೋವನೇ ಅವರ ವ್ಯಾಜ್ಯವನ್ನು ನಡಿಸಿ ಸೂರೆಮಾಡಿದವರ ಜೀವವನ್ನು ಸೂರೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು