Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:17 - ಕನ್ನಡ ಸತ್ಯವೇದವು J.V. (BSI)

17 ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:17
13 ತಿಳಿವುಗಳ ಹೋಲಿಕೆ  

ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;


ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ;


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ನೀನು ಬಿತ್ತಿದರೂ ಕೊಯ್ಯುವದಿಲ್ಲ; ಎಣ್ಣೆಯ ಕಾಯಿಯನ್ನು ತುಳಿದರೂ ಮೈಗೆ ಎಣ್ಣೆ ಹಚ್ಚಿಕೊಳ್ಳುವದಿಲ್ಲ, ದ್ರಾಕ್ಷೆಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವದಿಲ್ಲ.


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು