ಹಬಕ್ಕೂಕ 3:19 - ಕನ್ನಡ ಸತ್ಯವೇದವು J.V. (BSI)19 ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.