ಹಬಕ್ಕೂಕ 3:3 - ಕನ್ನಡ ಸತ್ಯವೇದವು J.V. (BSI)3 ದೇವರು ತೇಮಾನಿನಿಂದ ಬರುತ್ತಾನೆ, ಸದಮಲಸ್ವಾವಿುಯು ಪಾರಾನ್ ಪರ್ವತದಿಂದ ಐತರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನು ಆವರಿಸುತ್ತಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು. ಅಧ್ಯಾಯವನ್ನು ನೋಡಿ |