Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:10 - ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:10
26 ತಿಳಿವುಗಳ ಹೋಲಿಕೆ  

ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು.


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಆದದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಕ್ಕಳು ಹುಟ್ಟಿದರು.


ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು