Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:11 - ಕನ್ನಡ ಸತ್ಯವೇದವು J.V. (BSI)

11 ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:11
24 ತಿಳಿವುಗಳ ಹೋಲಿಕೆ  

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ನಿಮ್ಮ ಸಹೋದರರನ್ನು ಅಮ್ಮಿ, ನಿಮ್ಮ ಸಹೋದರಿಯರನ್ನು ರುಹಾಮ ಅನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು