Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:5 - ಕನ್ನಡ ಸತ್ಯವೇದವು J.V. (BSI)

5 ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಷ್ಟೇ ಅಲ್ಲ, ಅಂದೇ ಜೆಸ್ರೀಲಿನ ಕಣಿವೆಯಲ್ಲಿ ಇಸ್ರಯೇಲಿನ ಬಿಲ್ಲುಶಕ್ತಿಯನ್ನು ಮುರಿದುಬಿಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:5
9 ತಿಳಿವುಗಳ ಹೋಲಿಕೆ  

ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು