Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:1
24 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


(ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಅವರು ಹೆಚ್ಚಿದ ಹಾಗೆಲ್ಲಾ ನನಗೆ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನಕ್ಕೆ ಮಾರ್ಪಡಿಸುವೆನು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು