Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:14 - ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:14
21 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.


ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವದು.


ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿಬಿಟ್ಟರು; ಅದರ ಘನವಂತರಿಗೋಸ್ಕರ ಚೀಟುಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.


ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ಎಫ್ರಾಯೀವಿುಗೆ ರಕ್ಷಣೆಯಾಗಿರುವ ಕೋಟೆಯೂ ದಮಸ್ಕವು ನಡಿಸುವ ರಾಜ್ಯಾಧಿಕಾರವೂ ಇಲ್ಲವಾಗುವವು; ಅರಾಮ್ಯರಲ್ಲಿ ಉಳಿದವರಿಗೆ ಇಸ್ರಾಯೇಲ್ಯರ ಮಹಿಮೆಯ ಗತಿಯಾಗುವದು ಎಂಬದು ಸೇನಾಧೀಶ್ವರನಾದ ಯೆಹೋವನ ನುಡಿ.


ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಿತು?


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಿಯನ್ನೂ ಕೊಲ್ಲುವನೋ ಏನೋ ಎಂದು ನನಗೆ ಭಯವದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ಅಶ್ಶೂರದ ಅರಸನಾದ ಶಲ್ಮನೆಸೆರನು ಇವನಿಗೆ ವಿರೋಧವಾಗಿ ಬಂದಾಗ ಇವನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ನಿಮ್ಮ ದುಷ್ಟತನವು ಬಹಳವಾಗಿರುವದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವದು; ಬೆಳಗಾಗುವದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.


ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.


ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು