ಹೋಶೇಯ 10:9 - ಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಇಸ್ರೇಲೇ, ನೀನು ಗಿಬ್ಯದವರ ಕಾಲದಿಂದಲೂ ಪಾಪ ಮಾಡುತ್ತಲೇ ಬಂದಿರುವೆ. (ಆ ಜನರು ಅಲ್ಲಿ ಪಾಪವನ್ನು ಮಾಡುತ್ತಲೇ ಇದ್ದಾರೆ.) ಗಿಬ್ಯದ ಆ ದುಷ್ಟ ಜನರನ್ನು ಯುದ್ಧವು ಹಿಡಿದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ. ಅಧ್ಯಾಯವನ್ನು ನೋಡಿ |