Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:2 - ಕನ್ನಡ ಸತ್ಯವೇದವು J.V. (BSI)

2 [ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:2
28 ತಿಳಿವುಗಳ ಹೋಲಿಕೆ  

ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು.


ಇಸ್ರಾಯೇಲ್ಯರು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಫೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಸುಡುವದಕ್ಕಾಗಿ ಅದರ ಮೆಟ್ಲುಗಳನ್ನು ಹತ್ತುತ್ತಿರುವಾಗ.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಅವರು ಯೆಹೋವನನ್ನು ಬಿಟ್ಟು ಬಾಳ್ ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದದರಿಂದ


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ?


ಅನ್ಯದೇವತೆಗಳಿಗೆ ಧೂಪಹಾಕುವದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು