Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:7 - ಕನ್ನಡ ಸತ್ಯವೇದವು J.V. (BSI)

7 ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:7
18 ತಿಳಿವುಗಳ ಹೋಲಿಕೆ  

ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ಮೇಲಕ್ಕೆ ಮಾತ್ರ ತಿರುಗಿಕೊಳ್ಳುವದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ; ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿವಿುತ್ತ ಖಡ್ಗಹತರಾಗಿ ಬೀಳುವರು; ಅವರ ಪತನವು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವದು.


ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.


ಇಸ್ರಾಯೇಲು ಅಗಡುಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲಸ್ಥಳದಲ್ಲಿ ಮೇಯಿಸುವನೋ?


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಿಮ್ಮ ಪಿತೃಗಳು ಐಗುಪ್ತದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ಸಾವಕಾಶ ಮಾಡದೆ ಕಳುಹಿಸಿದ್ದೇನೆ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು