ಹೋಶೇಯ 11:9 - ಕನ್ನಡ ಸತ್ಯವೇದವು J.V. (BSI)9 ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು; ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾವಿು, ನಾನು ರೋಷದಿಂದ ಬಾರೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.