Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:4 - ಕನ್ನಡ ಸತ್ಯವೇದವು J.V. (BSI)

4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:4
18 ತಿಳಿವುಗಳ ಹೋಲಿಕೆ  

ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವನು ತನ್ನ ಸಂಗಡ ದೇವರು ಮಾತಾಡಿದ ಸ್ಥಳಕ್ಕೆ ಬೇತೇಲೆಂದು ಹೆಸರಿಟ್ಟನು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯನ್ನು ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.


ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ


ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.


ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.


ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.


ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು.


ಆ ಪುರುಷನು ತಾನು ಗೆಲ್ಲದೆ ಇರುವದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು