ಹೋಶೇಯ 12:6 - ಕನ್ನಡ ಸತ್ಯವೇದವು J.V. (BSI)6 [ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು. ಅಧ್ಯಾಯವನ್ನು ನೋಡಿ |
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.