ಹೋಶೇಯ 13:14 - ಕನ್ನಡ ಸತ್ಯವೇದವು J.V. (BSI)14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ. ಅಧ್ಯಾಯವನ್ನು ನೋಡಿ |