Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:7 - ಕನ್ನಡ ಸತ್ಯವೇದವು J.V. (BSI)

7 ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ನಾನು ಅವರಿಗೆ ಸಿಂಹದಂತಿರುವೆನು. ದಾರಿಯ ಮಗ್ಗುಲಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದ್ದರಿಂದಲೇ ನಾನು ಅವರಿಗೆ ಸಿಂಹದಂತಿರುವೆನು. ದಾರಿ ಬದಿಯಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು. ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:7
10 ತಿಳಿವುಗಳ ಹೋಲಿಕೆ  

ನಾನು ಎಫ್ರಾಯೀವಿುಗೆ ಸಿಂಹವೂ ಯೆಹೂದಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ಎತ್ತಿಕೊಂಡು ಒಯ್ಯಲು ಯಾರೂ ಬಿಡಿಸರು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ಬೇಟೆಯಿಲ್ಲದೆ ಸಿಂಹವು ಅರಣ್ಯದಲ್ಲಿ ಗರ್ಜಿಸುವದೋ? ಏನೂ ಹಿಡಿದುಕೊಂಡಿರದೆ ಪ್ರಾಯದ ಸಿಂಹವು ಗವಿಯಲ್ಲಿ ಗುರುಗುಟ್ಟುವದೋ?


ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.


ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ. ನಿನ್ನ ಅದ್ಭುತಚಮತ್ಕಾರವನ್ನು ತಿರಿಗಿ ನನ್ನಲ್ಲಿ ತೋರಿಸುವಿ.


ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು