ಹೋಶೇಯ 14:2 - ಕನ್ನಡ ಸತ್ಯವೇದವು J.V. (BSI)2 [ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು. ಅಧ್ಯಾಯವನ್ನು ನೋಡಿ |