Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:4 - ಕನ್ನಡ ಸತ್ಯವೇದವು J.V. (BSI)

4 ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:4
30 ತಿಳಿವುಗಳ ಹೋಲಿಕೆ  

ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ ನಿನ್ನ ಹೆಸರಿನ ನಿವಿುತ್ತ ಕಾರ್ಯವನ್ನು ಸಾಧಿಸು; ನಮ್ಮ ದ್ರೋಹಗಳು ಬಹಳ, ನಿನಗೆ ಪಾಪವನ್ನು ಮಾಡಿದ್ದೇವೆ.


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಜನೋಪಕಾರವೂ ಪ್ರತ್ಯಕ್ಷವಾದಾಗ


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.


ನನ್ನ ಕಡೆಯಿಂದ ತಿರಿಗಿಕೊಳ್ಳುವದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ ಮೇಲಕ್ಕೆತ್ತುವವರು ಯಾರೂ ಇಲ್ಲ.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ನಾನು ದುಷ್ಟನಿಗೆ - ನೀನು ಸತ್ತೇ ಸಾಯುವಿ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸುವ ಪಕ್ಷದಲ್ಲಿ,


ಯೆಹೋವನಾದ ನಾನೇ ಬಿದ್ದುಹೋದದನ್ನು ಕಟ್ಟಿ ಹಾಳಾದದನ್ನು ಬೆಳೆಯಿಸಿದ್ದೇನೆಂಬದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವದು; ಯೆಹೋವನಾದ ನಾನೇ ನುಡಿದಿದ್ದೇನೆ, ನಡಿಸುತ್ತೇನೆ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿನ್ಯಾಯ ಪ್ರೀತಿದಯೆಗಳಿಂದ ನಿನ್ನನ್ನು ವರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು