Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:6 - ಕನ್ನಡ ಸತ್ಯವೇದವು J.V. (BSI)

6 ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ ಮರದಂತೆ ಕಂಗೊಳಿಸುವದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಕೊಂಬೆಗಳು ಹರಡಿಕೊಂಡು, ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:6
19 ತಿಳಿವುಗಳ ಹೋಲಿಕೆ  

ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.


ಯೆಹೋವನು ನಿನಗೆ ಸುಂದರಫಲದಿಂದ ಅಂದವಾದ ಹಚ್ಚನೆಯ ಒಲೀವಮರವೆಂದು ಹೆಸರಿಟ್ಟಿದ್ದನು; ಆ ಮರಕ್ಕೆ ಬೆಂಕಿಯಿಕ್ಕಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.


ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು.


ಅವನು ಹತ್ತರ ಬಂದು ಅವನಿಗೆ ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ನೋಡಿದಾಗ ಅವನನ್ನು ಆಶೀರ್ವದಿಸಿ - ಆಹಾ, ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವದು.


ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರುವೃಕ್ಷದ ಹಾಗೆ ವೃದ್ಧಿಯಾಗುವರು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು