ಹೋಶೇಯ 14:7 - ಕನ್ನಡ ಸತ್ಯವೇದವು J.V. (BSI)7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು. ಅಧ್ಯಾಯವನ್ನು ನೋಡಿ |