Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:8 - ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:8
23 ತಿಳಿವುಗಳ ಹೋಲಿಕೆ  

ನಾನು ಕಾಣದಿರುವದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮಾಡುವದಿಲ್ಲ ಎಂದು ಹೇಳುವದಕ್ಕಾದೀತೇ?


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


ದೇವದಾರು ಕಸ್ತೂರಿಜಾಲಿ ಸುಗಂಧ ಒಲೀವ ಮರಗಳನ್ನು ಅಡವಿಯಲ್ಲಿ ನೆಡುವೆನು, ತುರಾಯಿ ತಪಸಿ ತಿಲಕ ವೃಕ್ಷಗಳನ್ನು ಅರಣ್ಯದಲ್ಲಿ ತೋಪಾಗಿ ಬೆಳೆಯಿಸುವೆನು;


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು