ಹೋಶೇಯ 14:9 - ಕನ್ನಡ ಸತ್ಯವೇದವು J.V. (BSI)9 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು. ಅಧ್ಯಾಯವನ್ನು ನೋಡಿ |