Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:15 - ಕನ್ನಡ ಸತ್ಯವೇದವು J.V. (BSI)

15 ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:15
33 ತಿಳಿವುಗಳ ಹೋಲಿಕೆ  

ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.


ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.


ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ತೋಟಗಳ ಫಲವನ್ನು ತಾವೇ ಅನುಭವಿಸುವರು.


ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.


ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ.


ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.


ಆಗ ಅವರು ಆತನ ಮಾತು ನಂಬಿ ಆತನನ್ನು ಕೀರ್ತಿಸಿದರು.


ಆ ಕಾಲದಲ್ಲಿ ಇಸ್ರಾಯೇಲ್ಯರು ಈ ಹಾಡನ್ನು ಗಾನಮಾಡಿದರು; ಏನೆಂದರೆ - ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ.


ನೀನು ಐಗುಪ್ತದೇಶದಲ್ಲಿದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.


ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ನಮ್ಮ ಯೌವನಾರಭ್ಯ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆಂದು ಇಸ್ರಾಯೇಲು ಹೇಳಲಿ.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಈಗತಾನೆ ನನ್ನನ್ನು - ನನ್ನ ತಂದೆ, ನನ್ನ ಯೌವನದ ಆಪ್ತನು ಎಂದು ಕರೆಯುತ್ತೀಯಲ್ಲಾ.


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿತವಾಯಿತು.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು