ಹೋಶೇಯ 2:18 - ಕನ್ನಡ ಸತ್ಯವೇದವು J.V. (BSI)18 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |