Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:23 - ಕನ್ನಡ ಸತ್ಯವೇದವು J.V. (BSI)

23 ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಕೆಯ ದೇಶದಲ್ಲಿ ನಾನು ಬೀಜ ಬಿತ್ತುವೆನು. ನಾನು ಲೋರುಹಾಮಳಿಗೆ ಕರುಣೆ ತೋರುವೆನು. ಲೋ ಅಮ್ಮಿಗೆ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಆಗ ಅವರು, ‘ನೀನು ನಮ್ಮ ದೇವರು’ ಎಂದು ಹೇಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:23
33 ತಿಳಿವುಗಳ ಹೋಲಿಕೆ  

ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು. ದೇವರು ಒಬ್ಬನೇ ಆಗಿರಲಾಗಿ ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವಳು ಪುನಃ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಾಗ ಯೆಹೋವನು ಹೋಶೇಯನನ್ನು ಕುರಿತು - ಈ ಮಗುವಿಗೆ ಲೋರುಹಾಮ ಎಂಬ ಹೆಸರಿಡು; ಏಕಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವದಿಲ್ಲ, ಅವರನ್ನು ಎಷ್ಟು ಮಾತ್ರವೂ ಕ್ಷವಿುಸುವದಿಲ್ಲ.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬಿತ್ತುವ ದಿನಗಳು ಬರುವವು.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.


ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.


ಅವರು ನನ್ನನ್ನು - ನಮ್ಮ ದೇವರೇ, ಇಸ್ರಾಯೇಲ್ಯರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ ಎಂದು ಕೂಗಿಕೊಳ್ಳುವರು.


[ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ನೀವು ನನಗೆ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಹೊಲಸಿನಿಂದ ಉದ್ಧರಿಸಿ ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು