ಹೋಶೇಯ 2:3 - ಕನ್ನಡ ಸತ್ಯವೇದವು J.V. (BSI)3 ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು. ಅಧ್ಯಾಯವನ್ನು ನೋಡಿ |