Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:7 - ಕನ್ನಡ ಸತ್ಯವೇದವು J.V. (BSI)

7 ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:7
41 ತಿಳಿವುಗಳ ಹೋಲಿಕೆ  

ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ಅವರ ಹೆಸರುಗಳೇನಂದರೆ, ಒಹೊಲ ಎಂಬದು ಅಕ್ಕನದು, ಒಹೊಲೀಬ ಎಂಬದು ತಂಗಿಯದು; ಅವರು ನನ್ನ ಹೆಂಡರಾಗಿ ಗಂಡುಹೆಣ್ಣುಮಕ್ಕಳನ್ನು ಹೆತ್ತರು. (ಒಹೊಲ ಎಂಬದು ಸಮಾರ್ಯವನ್ನೂ, ಒಹೊಲೀಬ ಎಂಬದು ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.)


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದಿ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.


ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಇವಳು ನಾಯಕೋಪನಾಯಕರೂ ಯೋಧರೂ ವಿಚಿತ್ರಾಂಬರರೂ ಅಶ್ವಾರೂಢರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿದಳು.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು