Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:9 - ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:9
15 ತಿಳಿವುಗಳ ಹೋಲಿಕೆ  

ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಕಣವೂ ದ್ರಾಕ್ಷೆಯ ತೊಟ್ಟಿಯೂ ನಿನ್ನ ಜನರಿಗೆ ಜೀವನವಾಗವು; ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿಹೋಗುವದು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹುವರುಷಗಳ ಕಾಲವಾದ ನಂತರ ಮಹಾಸೈನ್ಯದಿಂದಲೂ ಅಧಿಕಸನ್ನಾಹದಿಂದಲೂ ಸಮೇತನಾಗಿ ಬರುವನು.


ನಿನ್ನ ವಸ್ತ್ರಗಳನ್ನು ಸೆಳೆದು ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ದಿಬ್ಬವನ್ನು ಕೆಡವಿ ನಿನ್ನ ಜಗಲಿಗಳನ್ನು ಒಡೆದು ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು