Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:13 - ಕನ್ನಡ ಸತ್ಯವೇದವು J.V. (BSI)

13 ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:13
20 ತಿಳಿವುಗಳ ಹೋಲಿಕೆ  

ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ಮತ್ತೆ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು - ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೋಡಿದಿಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ಸೂಳೆಯಾಗಿ ನಡೆದಳಷ್ಟೆ.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.


[ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.


ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ ಹಾದುಹೋಗುವವರೆಲ್ಲರನ್ನು ಸೇರಿ ಸೂಳೆತನವನ್ನು ಹೆಚ್ಚಾಗಿ ನಡಿಸಿದ್ದೀ.


ನೀನು ಪೂಜಾಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರನಡಿಸಿದಿ. (ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.)


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಮಹೋನ್ನತಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದೀ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದೀ.


ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.


ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗೋಸ್ಕರ ಗುಡಾರಗಳನ್ನು ನೇಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು