ಹೋಶೇಯ 4:14 - ಕನ್ನಡ ಸತ್ಯವೇದವು J.V. (BSI)14 ಸೂಳೆಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವದಿಲ್ಲ; ನೀವೇ ಸೂಳೆಯರನ್ನು ಕರಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿ |