Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:13 - ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:13
16 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವದು; ಎಫ್ರಾಯೀವಿುಗೆ ಅವಮಾನವಾಗುವದು, ಇಸ್ರಾಯೇಲು ತಾನು ಸಂಕಲ್ಪಿಸಿಕೊಂಡ ವಿಷಯವಾಗಿ ನಾಚಿಕೆಪಡುವದು.


ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ; ಎಫ್ರಾಯೀಮು ಹಣತೆತ್ತು ವಿುಂಡರನ್ನು ಸಂಪಾದಿಸಿಕೊಂಡಿದೆ.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಅಣ್ಣನು ಹೂಂಕರಿಸಿ ದೇಶದ ವ್ರಣವೈದ್ಯನಾಗಿರುವದಕ್ಕೆ ನನಗಿಷ್ಟವಿಲ್ಲ, ನನ್ನ ಮನೆಯಲ್ಲಿ ಅನ್ನವೆಲ್ಲಿ, ಅಂಗಿಯೆಲ್ಲಿ? ನನ್ನನ್ನು ಜನದೊಡೆಯನನ್ನಾಗಿ ಮಾಡಬೇಡಿರಿ ಎಂದು ಹೇಳುವನು.


ಒಹೊಲಳು ನನ್ನ ಹೆಂಡತಿಯಾಗಿದ್ದರೂ ಸೂಳೆಯಾಗಿ ನಡೆದು ತನ್ನ ವಿುಂಡರನ್ನು ಅಂದರೆ


ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು