Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:14 - ಕನ್ನಡ ಸತ್ಯವೇದವು J.V. (BSI)

14 ನಾನು ಎಫ್ರಾಯೀವಿುಗೆ ಸಿಂಹವೂ ಯೆಹೂದಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ಎತ್ತಿಕೊಂಡು ಒಯ್ಯಲು ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:14
16 ತಿಳಿವುಗಳ ಹೋಲಿಕೆ  

ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,


ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.


ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.


ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ. ನಿನ್ನ ಅದ್ಭುತಚಮತ್ಕಾರವನ್ನು ತಿರಿಗಿ ನನ್ನಲ್ಲಿ ತೋರಿಸುವಿ.


ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,


ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ.


ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು