ಹೋಶೇಯ 6:1 - ಕನ್ನಡ ಸತ್ಯವೇದವು J.V. (BSI)1 ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು. ಅಧ್ಯಾಯವನ್ನು ನೋಡಿ |