Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:1 - ಕನ್ನಡ ಸತ್ಯವೇದವು J.V. (BSI)

1 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:1
30 ತಿಳಿವುಗಳ ಹೋಲಿಕೆ  

ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ದಾನೇ, ನಿನ್ನ ದೇವರ ಜೀವದಾಣೆ ಎಂತಲೂ ಬೇರ್ಷೆಬ ಮಾರ್ಗದ ಜೀವದಾಣೆ ಎಂತಲೂ ಸಮಾರ್ಯದ ಪಾಪಮೂರ್ತಿಯ ಮೇಲೆ ಪ್ರಮಾಣಮಾಡುವವರು ಬಿದ್ದುಹೋಗುವರು, ಮತ್ತೆ ಏಳರು.


ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ; ಎಫ್ರಾಯೀಮು ಹಣತೆತ್ತು ವಿುಂಡರನ್ನು ಸಂಪಾದಿಸಿಕೊಂಡಿದೆ.


ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವದಕ್ಕೆ ಇನ್ನೆಷ್ಟು ಕಾಲ ಹಿಡಿಯುವದೋ?


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಅವರ ಹೆಸರುಗಳೇನಂದರೆ, ಒಹೊಲ ಎಂಬದು ಅಕ್ಕನದು, ಒಹೊಲೀಬ ಎಂಬದು ತಂಗಿಯದು; ಅವರು ನನ್ನ ಹೆಂಡರಾಗಿ ಗಂಡುಹೆಣ್ಣುಮಕ್ಕಳನ್ನು ಹೆತ್ತರು. (ಒಹೊಲ ಎಂಬದು ಸಮಾರ್ಯವನ್ನೂ, ಒಹೊಲೀಬ ಎಂಬದು ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.)


ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.


ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.


ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು