ಹೋಶೇಯ 7:12 - ಕನ್ನಡ ಸತ್ಯವೇದವು J.V. (BSI)12 ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು; ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ. ಅಧ್ಯಾಯವನ್ನು ನೋಡಿ |