Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:14 - ಕನ್ನಡ ಸತ್ಯವೇದವು J.V. (BSI)

14 ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:14
23 ತಿಳಿವುಗಳ ಹೋಲಿಕೆ  

ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ.


ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಆ ದಿನದಲ್ಲಿ ಸೌಧಗಳ ಕೀರ್ತನೆಗಳು ಕಿರಚಾಟವಾಗುವವು; ಇದು ಕರ್ತನಾದ ಯೆಹೋವನ ನುಡಿ; ಆಗ ಹೆಣಗಳು ಹೆಚ್ಚುವವು; ಅವುಗಳನ್ನು ಎಲ್ಲೆಲ್ಲಿಯೂ ಮೌನವಾಗಿ ಬಿಸಾಟುಬಿಡುವರು; ಉಸಿರಾಡದಿರ್ರಿ!


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು


ಈಗಲೂ ಅನ್ಯರು ನನ್ನ ಜನರನ್ನು ಹಕ್ಕಿಲ್ಲದೆ ಒಯ್ದಿರಲು ನಾನು ಇಲ್ಲಿ ಸುಮ್ಮನಿರುವದು ಹೇಗೆ? ನನ್ನ ಪ್ರಜೆಯನ್ನು ಆಳುವವರು [ರೌದ್ರದಿಂದ] ಕಿರಚುತ್ತಾರೆ; ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ಆದದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಮೇಲೆ ಎದ್ದು ಕುಣಿದಾಡಿದರು.


ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;


ಅವರು ನನ್ನನ್ನು - ನಮ್ಮ ದೇವರೇ, ಇಸ್ರಾಯೇಲ್ಯರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ ಎಂದು ಕೂಗಿಕೊಳ್ಳುವರು.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು