Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:4 - ಕನ್ನಡ ಸತ್ಯವೇದವು J.V. (BSI)

4 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬೆಂಕಿ ಹೊತ್ತಿಸಿ ಉರಿಸಿ ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೋ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:4
10 ತಿಳಿವುಗಳ ಹೋಲಿಕೆ  

ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ.


ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು