Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:5 - ಕನ್ನಡ ಸತ್ಯವೇದವು J.V. (BSI)

5 ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:5
20 ತಿಳಿವುಗಳ ಹೋಲಿಕೆ  

ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಊರುಬಾಗಲಲ್ಲಿ ಕೂತುಕೊಳ್ಳುವವರ ಆಡಿಕೆಗೆ ಗುರಿಯಾಗಿದ್ದೇನೆ. ಕುಡಿಕರು ನನ್ನ ವಿಷಯ ಹಾಡಿ ಗೇಲಿಮಾಡುತ್ತಾರೆ.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು