ಹೋಶೇಯ 7:8 - ಕನ್ನಡ ಸತ್ಯವೇದವು J.V. (BSI)8 ಎಫ್ರಾಯೀಮು ಜನಾಂಗಗಳಲ್ಲಿ ಕಲೆತುಕೊಳುತ್ತದೆ; ಎಫ್ರಾಯೀಮು ತಿರುವಿಹಾಕದ ಚಪಾತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಎಪ್ರಯಿಮ್ ಅನ್ಯರಾಷ್ಟ್ರಗಳೊಂದಿಗೆ ಬೆರೆತುಕೊಳ್ಳುತ್ತದೆ. ಅದು ತಿರುವಿಹಾಕಿದ ರೊಟ್ಟಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಎಫ್ರಾಯೀಮು ಬೇರೆ ದೇಶಗಳೊಂದಿಗೆ ಬೆರೆತುಹೋಗುತ್ತದೆ. ಎಫ್ರಾಯೀಮು ತಿರುವಿಹಾಕದ ಚಪಾತಿಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.