Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:2 - ಕನ್ನಡ ಸತ್ಯವೇದವು J.V. (BSI)

2 ಅವರು ನನ್ನನ್ನು - ನಮ್ಮ ದೇವರೇ, ಇಸ್ರಾಯೇಲ್ಯರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನನ್ನು ತಮ್ಮ ದೇವರೆಂದೂ ತಾವು ದೇವಜನರೆಂದೂ ನನ್ನನ್ನು ಅರಿತವರೆಂದೂ ಕೂಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ‘ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:2
14 ತಿಳಿವುಗಳ ಹೋಲಿಕೆ  

ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು.


ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದೆ ನಡೆಯುವವನು ಸುಳ್ಳುಗಾರನಾಗಿದ್ದಾನೆ; ಸತ್ಯವೆಂಬದು ಅವನಲ್ಲಿ ಇಲ್ಲ.


ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.


ತರುವಾಯ ಉಳಿದ ಕನ್ಯೆಯರು ಸಹ ಬಂದು - ಸ್ವಾಮೀ, ಸ್ವಾಮೀ, ನಮಗೆ ತೆರೆಯಿರಿ ಅಂದರು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ.


ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಇಸ್ರಾಯೇಲ್ಯರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು